ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ

Date:

ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ –

ಬೆಂಗಳೂರು: ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಮತ್ತಿಬ್ಬರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು.
2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು. 2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...