ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು: ಕ್ಷಮೆ ಯಾಚಿಸುವಂತೆ ಪಟ್ಟು
ಬೆಂಗಳೂರು: ಇತ್ತೀಚೆಗೆ ಥಗ್ ಲೈಫ್ ಅನ್ನೋ ತಮಿಳು ಸಿನಿಮಾದ ಇವೆಂಟ್ನಲ್ಲಿ ನಟ ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಅನ್ನೋ ಮೂಲಕ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಇದೀಗ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ರಿಲೀಸ್ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ.