ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ: ನಟ ಕಮಲ್ ಹಾಸನ್
ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ. ಚೆನ್ನೈನಲ್ಲಿ ಮಾತನಾಡಿದ ಅವರು, ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದರು.
ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ನ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು.
ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.