ಭ್ರಷ್ಟರ ಬೇಟೆ: ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ದಾವಣಗೆರೆ, ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.
ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್ಡಿಎ ಶೈಲ ಸುಭಾಷ್ ತತ್ರಾಣಿ,
ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಓ ರಾಮಕೃಷ್ಣ, ಉಡುಪಿ ಜಿಲ್ಲೆ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್ ಗಿರೀಶ್ ರಾವ್, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.