ಕೊರೋನಾ ಕೇಸ್ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Date:

ಕೊರೋನಾ ಕೇಸ್ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಚೀನಾ ತಳಿಯ ಗುಮ್ಮ ಕಂಗೆಡಿಸಿದೆ. ಮುಂಗಾರು ಮಳೆಯ ಜೊತೆ ಜೊತೆಯಲ್ಲೆ ಕೊರೊನಾ ಹಾವಳಿ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿದೆ. ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು,
ಇದೀಗ ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆ ಆರೋಗ್ಯ ಇಲಾಖೆ ಶಾಲೆಗಳಿಗೆ ಮಾರ್ಗಸೂಚಿ ರಿಲೀಸ್ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
* ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
* ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
* ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
* ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
* ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...