ಭಾಷೆ ಬಗ್ಗೆ ಮಾತನಾಡಲು ನೀವೇನು ಇತಿಹಾಸಕಾರರೇ!? ಕಮಲ್‌ಗೆ ಹೈಕೋರ್ಟ್‌ ಚಾಟಿ!

Date:

ಭಾಷೆ ಬಗ್ಗೆ ಮಾತನಾಡಲು ನೀವೇನು ಇತಿಹಾಸಕಾರರೇ!? ಕಮಲ್‌ಗೆ ಹೈಕೋರ್ಟ್‌ ಚಾಟಿ!

ಬೆಂಗಳೂರು:- ಭಾಷೆ ಬಗ್ಗೆ ಮಾತನಾಡಲು ನೀವೇನು ಇತಿಹಾಸಕಾರರೇ!? ಎಂದು ಕಮಲ್‌ ಹಾಸನ್ ಗೆ ಹೈಕೋರ್ಟ್‌ ಚಾಟಿ ಬೀಸಿದೆ. ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಮಲ್‌ ಹಾಸನ್‌ ಅವರು ಬಿಡುಗಡೆಗೆ ಅವಕಾಶ ನೀಡಬೇಕು ಮತ್ತು ಚಿತ್ರ ಮಂದಿರಕ್ಕೆ ಪೊಲೀಸ್‌ ಭದ್ರತೆ ಒದಗಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಡೆಯಿತು. ಈ ವೇಳೆ ಕಮಲ್‌ ಹಾಸನ್‌ ಪರ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡನೆ ಮಾಡಿದರು.

ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ ಎಂದು ಪ್ರಶ್ನಿಸಿದರು. ಎರಡು ದಿನದಲ್ಲಿ ಚಲನಚಿತ್ರ ಬಿಡುಗಡೆ ಆಗಲಿದ್ದು, ಈ ಸಂದರ್ಭದಲ್ಲಿ ವಿವಾದ ಶುರುವಾಗಿದೆ. ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ವಿವಾದ ಆರಂಭವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು.

ಈ ವೇಳೆ ನ್ಯಾಯಮೂರ್ತಿಗಳು, ನೆಲ, ಭಾಷೆಯ ಜೊತೆ ಜನರ ಭಾವನೆ ಇರುತ್ತದೆ. ಜನರ ಭಾವನೆಗೆ ಯಾರೂ ಧಕ್ಕೆ ತರಬಾರದು. ಜನರು ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ. ಕಮಲ್‌ ಹಾಸನ್‌ ಕ್ಷಮೆ ಕೇಳಿದ್ದಾರಾ ಎಂದು ಪ್ರಶ್ನಿಸಿದರು.

ಭಾಷೆ ಹುಟ್ಟಿದರ ಬಗ್ಗೆ ನೀವು ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ ಇತಿಹಾಸಕಾರರೇ? ಒಂದೇ ಒಂದು ಕ್ಷಮೆ ಕೇಳೋದಕ್ಕೆ ಯಾಕೆ ಇಷ್ಟೊಂದು ಹಾವ ಭಾವ? ಈ ಹಿಂದೆ ರಾಜಗೋಪಾಲಾಚಾರಿ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಕ್ಷಮೆಯಾಚನೆ ಮಾಡಿದ್ದು ನಿಮಗೆ ಗೊತ್ತಿಲ್ವೆ ಎಂದು ಕುಟುಕಿದರು.

350 ಕೋಟಿ ರೂ. ಸಿನಿಮಾಗೆ ಹಾಕಿದ್ದೀರಿ ಎನ್ನುತ್ತೀರಿ. ಭಾವನೆಗೆ ಧಕ್ಕೆ ಮಾಡಿ ಇಲ್ಲಿ ಸಂಪಾದನೆ ಮಾಡಬೇಕಾ? ಎಲ್ಲವೂ ಸರಾಗವಾಗಿ ಆಗಬೇಕು ಅಂದರೆ ಕ್ಷಮೆಯನ್ನು ಕೋರಿ. ಅಭಿವ್ಯಕ್ತಿ ಸ್ವಾತಂತ್ರ‍್ಯದಿಂದ ಭಾವನೆ ಧಕ್ಕೆ ಆಗಬಾರದು. ಕೋಟ್ಯಂತರ ರೂ. ಹಾಕಿದ್ದೀರಿ. ಕರ್ನಾಟಕದಲ್ಲಿ ಯಾಕೆ ಸಿನಿಮಾ ರಿಲೀಸ್‌ ಮಾಡುತ್ತೀರಿ? ಕರ್ನಾಟಕವನ್ನು ಬಿಟ್ಟು ಬಿಡಿ ಎಂದು ಖಾರವಾಗಿ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...