ದಾರುಣ ಘಟನೆ: RCB ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು
ಬೆಳಗಾವಿ: ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ನಲ್ಲಿ ಗೆಲ್ಲುವ ಮೂಲಕ ಐಪಿಎಲ್ನ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ. ಲಕ್ಷಾಂತರ ಅಭಿಮಾನಿಗಳ ನಡುವೆ ಕಪ್ ಗೆದ್ದ ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದೆ. 4ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದ ಬೆಂಗಳೂರು ತಂಡ ಟ್ರೋಫಿ ಜೊತೆ ನಗುತ್ತಿದೆ.
ಇದರ ಮಧ್ಯೆ ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ.
ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.