ಕಾಲ್ತುಳಿತ ಸಂಭವಿಸಿ 11 ಸಾವು ಪ್ರಕರಣ: ರಾಷ್ಟ್ರಪತಿ, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿದ ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಆರ್ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.