ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್!

Date:

ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್!

ಬೆಂಗಳೂರು:- ಬರೋಬ್ಬರಿ 18 ವರ್ಷಗಳ ಬಳಿಕ ಚೊಚ್ಚಲ ಪ್ರಶಸ್ತಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು.

ಈ ವೇಳೆ ಅತೀ ಜನಸಂದಣಿಯಿಂದ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಇದೀಗ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ

ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಕೂಡ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು. ಭದ್ರತಾ ಲೋಪವಾಗಿದೆ ಎಂದು ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಜನರ ಸಾವುನೋವಿನ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...