ಕಾಲ್ತುಳಿತ ಕೇಸ್: ಇಂತಹ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿರಲಿಲ್ಲ – ಜಿ. ಪರಮೇಶ್ವರ್!

Date:

ಕಾಲ್ತುಳಿತ ಕೇಸ್: ಇಂತಹ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿರಲಿಲ್ಲ – ಜಿ. ಪರಮೇಶ್ವರ್!

ಬೆಂಗಳೂರು:- ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ. ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಬುಧವಾರ ಸಿಎಂ ಎಲ್ಲಾ ಮಾಹಿತಿ ಪಡೆದು ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಯಾವುದೇ ವಿವರಣೆ ಕೊಡಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆದ ನಂತರ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿದ್ದಾರೆ. 46 ಗಾಯಾಳುಗಳು ಮನೆಗೆ ಹೋಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರಿಗೆ ಗಂಭೀರ ಗಾಯಗಳೇನೂ ಆಗಿಲ್ಲ, ಆತಂಕ ಇಲ್ಲ. ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ ಮಾಡುತ್ತೇವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...