ಬೆಂಗಳೂರು ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಆವರು ಗುರುವಾರ ತಡರಾತ್ರಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹೌದು ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಡರಾತ್ರಿ 12.15ಕ್ಕೆ ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದ್ರು. ನೂತನ ಕಮಿಷನರ್ ಸೀಮಂತ್ ಕುಮಾರ್ ಅವರನ್ನು ಹಿರಿಯ ಅಧಿಕಾರಿಗಳು, ಡಿಸಿಪಿಗಳು ಸ್ವಾಗತಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಧಿಕಾರಿಗಳ ಜೊತೆ ಕಮಿಷನರ್ ಕಿರು ಸಭೆ ನಡೆಸಿದ್ರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತಾಡಿದ ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶದ ಮೇಲೆ ಅಧಿಕಾರ ಸ್ವೀಕರಿಸಿದ್ದೀನಿ ಎಂದ್ರು. ಇಂಥಹ ಕಠಿಣ ಪರಿಸ್ಥಿತಿಯಲ್ಲೂ ಕೂಡ ಅಧಿಕಾರ ಸ್ವೀಕರಿಸಿದ್ದು, ಹಿಂದಿನ ಕಮೀಷನರ್ ಗಳು ಕೂಡ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನ ಮುಂದುವರೆಸಿಕೊಂಡು ಹೋಗ್ತೀನಿ ಎಂದು ಹೇಳಿದ್ರು.