ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಕೆಎಸ್ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಬಲಿಯಾಗಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಕೇಸ್ ಗೆ ಸಂಬಂಧ ಕೆಎಸ್ಸಿಯ ಕಾರ್ಯದರ್ಶಿ ಎ ಶಂಕರ್ ಹಾಗೂ ಖಜಾಂಚಿ ಇ ಎಸ್ ಜಯರಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ‘ಪಾತ್ರ ಬಹಳ ಸೀಮಿತವಾಗಿದ್ದರೂ’ ದುರಂತಕ್ಕೆ ತಾವು ‘ನೈತಿಕ ಹೊಣೆಗಾರಿಕೆಯನ್ನು ಹೊಂದಿದ್ದೇವೆ’, ನೈತಿಕ ಜವಾಬ್ದಾರಿಯಿಂದ, ನಾವು ನಿನ್ನೆ ರಾತ್ರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ.
ದಿನಾಂಕ 06.06.2025 ರಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ” ಎಂದು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೈತಿಕ ಹೊಣೆಹೊತ್ತು ಕೆಎಸ್ಸಿಎ ಕಾರ್ಯದರ್ಶಿ ಎ ಶಂಕರ್ ರಾಜೀನಾಮೆ ನೀಡಿದ್ದಾರೆ.
ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಕೆಎಸ್ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ!
Date: