ಮುಡಾ ಪ್ರಕರಣ: ಇಡಿಯಿಂದ 100 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು..!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಯಲ್ಲಿ ನಡೆದ ಭಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ. ಮಾರುಕಟ್ಟೆ ಮೌಲ್ಯದ 92 ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಶಪಡಿಸಿಕೊಂಡ ಆಸ್ತಿಗಳನ್ನು ಸಹಕಾರಿ ಸಂಘಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಸಂಸ್ಥೆ ಆರೋಪಿಸಿದೆ. MUD ಅಧಿಕಾರಿಗಳು ಸೇರಿದಂತೆ ಹಲವಾರು ದೊಡ್ಡ ಹೆಸರುಗಳ ಬೇನಾಮಿಯಾಗಿರುವ ಜನರು ಈ ಆಸ್ತಿಗಳನ್ನು ಹೊಂದಿದ್ದಾರೆ. ಇಲ್ಲಿಯವರೆಗೆ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳ ಮಾರುಕಟ್ಟೆ ಮೌಲ್ಯ 400 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಈ ಮೊದಲು ಮುಡಾ ಹಗರಣದಲ್ಲಿ ಇ.ಡಿ 162 ಸೈಟ್ಗಲನ್ನು ಜಪ್ತಿ ಮಾಡಿತ್ತು. 162 ಸೈಟ್ಗಳ ಮಾರುಕಟ್ಟೆ ಮೌಲ್ಯ 300 ಕೋಟಿ ರೂಪಾಯಿ. ಈಗ 92 ಸೈಟ್ಗಳ ಮಾರುಕಟ್ಟೆ ಮೌಲ್ಯ 100 ಕೋಟಿ ರೂಪಾಯಿ. ಇದುವರೆಗೂ ಒಟ್ಟು 400 ಕೋಟಿ ರೂಪಾಯಿ ಆಸ್ತಿಪಾಸ್ತಿಯನ್ನು ಜಪ್ತಿ ಮಾಡಿದ್ದೇವೆ ಎಂದ ಇ.ಡಿ ಮಾಹಿತಿ ನೀಡಿದೆ.