ಯೋಗೀಶ್ ಗೌಡ ಕೊಲೆ ಪ್ರಕರಣ: ಜಾಮೀನು ರದ್ದು – ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ರದ್ದಾಗಿದ್ದು, ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವರು ಶರಣಾಗಿದ್ದಾರೆ. ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ವಿನಯ್ ಕುಲಕರ್ಣಿ ಮರಳಲಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ರದ್ದಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಜೂನ್ 6 ರಂದು ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ರದ್ದುಗೊಳಿಸಿತ್ತು. ಜೊತೆಗೆ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು.