No menu items!
15.2 C
Munich
Sunday, May 24, 2026

ಮಳೆ ಆರ್ಭಟ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ಸ್ಥಗಿತ!

Must read

ಮಳೆ ಆರ್ಭಟ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ಸ್ಥಗಿತ!

ಶಿವಮೊಗ್ಗ:- ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ನೀಡಿದ್ದಾರೆ

ಭಾರೀ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

- Advertisement -spot_img

More articles

- Advertisement -spot_img

Latest article