ಆಗಸ್ಟ್, ಸೆಪ್ಟೆಂಬರ್ನಲ್ಲಿ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಳಂದ ಶಾಸಕ ಬಿ ಆರ್ ಪಾಟೀಲ್ ಮಾಡಿರುವ ಆರೋಪ ಸಂಚಲನ ಸೃಷ್ಟಿಸಿತ್ತು. ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಈ ಪ್ರಕರಣ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ನಡೆಯಲಿದೆ.
ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಕಳೀಲಿ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್ಥಿಕ ಲಭ್ಯತೆಗೆ ಅನುಗುಣವಾಗಿ ಯಾವುದೇ ತಾರತಮ್ಯ ಇಲ್ಲ.
ಆಡಳಿತ ಪಕ್ಷ ವಿರೋಧ ಪಕ್ಷ ಅಂತಾ ಯಾವುದೇ ತಾರತಮ್ಯ ಮಾಡುವುದಿಲ್ಲ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಹಣಕಾಸನ್ನು ಒದಗಿಸುತ್ತಿದ್ದೇವೆ. ಒಬ್ಬರಿಗೆ ಹೆಚ್ಚಿಗೆ ನಿರೀಕ್ಷೆ ಇರಬಹುದು ಅದಕ್ಕೆ ತಕ್ಕಂತೆ ಆಗದೇ ಇರಬಹುದು. ಏನು ಅಭಿವೃದ್ಧಿ ಅಗುತ್ತಿಲ್ಲ. ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದರು.