ಹೃದಯಾಘಾತಕ್ಕೆ ಮತ್ತೊಂದು ಬಲಿ..! 1 ತಿಂಗಳ ಅಂತರದಲ್ಲಿ 16 ಜನರು ಸಾವು.!
ಹಾಸನ: ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿರುವ ಹಾಸನ ಜಿಲ್ಲೆಯ ಸಿದ್ದೇಶ್ವರ್ ನಗರದಲ್ಲಿ ನಡೆದಿದೆ. ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಆಟೋ ಚಾಲಕನಾಗಿದ್ದ ಗೋವಿಂದಗೆ ಇಂದು ಬೆಳಿಗ್ಗೆ ಏಳು ಗಂಟೆ ಸಮಯದಲ್ಲಿ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.