Karnataka Rain: ಈ ಜಿಲ್ಲೆಗಳಲ್ಲಿ ಜು.3ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ
ಕರ್ನಾಟಕದಲ್ಲಿ ಮುಂಗಾರಿನ ಅಬ್ಬರ ಶುರುವಾಗಿದ್ದು, ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 3ರ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದ್ದು, ಜುಲೈ 3ರಿಂದ ಹೆಚ್ಚಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲ ಸಾಧಾರಣ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 3ರಬಳಿಕ ಮಳೆ ಹೆಚ್ಚಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.