Commercial Cylinder Price: ವಾಣಿಜ್ಯ ಬಳಕೆಯ LPG ಸಿಲಿಂಡರ್ ದರದಲ್ಲಿ ಭಾರಿ ಇಳಿಕೆ..!
ಬೆಂಗಳೂರು: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1 ರಂದು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ಹೀಗಾಗಿ ಹೋಟೆಲ್ ಸೇರಿದಂತೆ ಸಿಲಿಂಡರ್ ನಂಬಿಕೊಂಡಿರುವ ಇನ್ನಿತರೆ ಉದ್ಯಮದಲ್ಲಿರುವವರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಹಾಗಾದರೆ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ಎಷ್ಟು ಹೆಚ್ಚಳ ಮಾಡಿವೆ,
ಯಾವ ನಗರದಲ್ಲಿ ಎಷ್ಟು ದರವಿದೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ. ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು,
ಈಗಾಗಲೇ ಹೆಚ್ಚುತ್ತಿರುವ ಇನ್ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಅಡುಗೆ ತಯಾರಿಕರು ನಿಟ್ಟುಸಿರು ಬಿಡುವಂತಾಗಿದೆ. 14.2 ಕೆಜಿ ದೇಶೀಯ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಏಪ್ರಿಲ್ನಲ್ಲಿ 41 ರೂ.ಗಳಷ್ಟು ಬೆಲೆ ಕಡಿಮೆ ಮಾಡಲಾಯಿತು. ನಂತರ ಮೇ ತಿಂಗಳಲ್ಲಿ 14.50 ರೂ. ಮತ್ತು ಜೂನ್ನಲ್ಲಿ 24 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು.