ಹೃದಯಾಘಾತಕ್ಕೆ ಬಲಿಯಾದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಬಲಿ..!
ಹಾಸನ: ದಿನಕ್ಕೊಂದರಂತೆ ಹಾಸನದಲ್ಲಿ ಕಿಲ್ಲರ್ ಹಾರ್ಟ್ ಅಟ್ಯಾಕ್ನಿಂದಾಗಿ ಹದಿಹರೆಯದ ಯುವಕ ಯುವತಿಯರೇ ಬಲಿಯಾಗುತ್ತಿದ್ದಾರೆ. ನಿನ್ನೆ ಒಂದೇ ದಿನದಲ್ಲಿ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆಗಳು ವರದಿಯಾಗಿತ್ತು. ಇದೀಗ ಮತ್ತೊಂದು ದುರಂತವು ಜಿಲ್ಲೆಯ ಜನರಲ್ಲಿ ಆತಂಕವನ್ನು ಮೂಡಿಸಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಲ್ಲಾರೆ ಗ್ರಾಮದಲ್ಲಿ ಗ್ರಾ.ಪಂ. ಸದಸ್ಯ ಸಂತೋಷ್ (41) ಹೃದಯಾಘಾತದಿಂದ ಅಸುನೀಗಿದ್ದಾರೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷ್ಗೆ ಹೃದಯಾಘಾತ ಸಂಭವಿಸಿತ್ತು. ಇದರೊಂದಿಗೆ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.