ಭಾರತೀಯ ನರ್ಸ್ ಗೆ ಕೊಂಚ ರಿಲೀಫ್: ಮರಣದಂಡನೆ ಮುಂದೂಡಿಕೆ!
ಸನಾ:- ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ಗೆ ಕೊಂಚ ರಿಲೀಫ್ ಸಿಕ್ಕಿದ್ದು, ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ.
ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಗೊಳಿಸಲು ಬುಧವಾರಕ್ಕೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಅವರ ರಕ್ಷಣೆಗೆ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸ ಶೇಖ್ ಹಬೀರ್ ಉಮರ್ ಬಿನ್ ಹಾಫಿಝ್ ಅವರ ಮೂಲಕ ನಡೆಸಿದ ಪ್ರಯತ್ನ ಫಲಪ್ರದವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.