ಆಘಾತಕಾರಿ ಘಟನೆ: ಭೂಕುಸಿತದಿಂದ ಓರ್ವ ಮಹಿಳೆ ಸಾವು.. ಸ್ಥಗಿತಗೊಂಡ ಅಮರನಾಥ ಯಾತ್ರೆ!
ಶ್ರೀನಗರ:- ಭೂಕುಸಿತದಿಂದ ಓರ್ವ ಮಹಿಳೆ ಸಾವನ್ನಪ್ಪಿದ ಪರಿಣಾಮ ಅಮರನಾಥ ಯಾತ್ರೆ ಸ್ಥಗಿತಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಸಾವನ್ನಪ್ಪಿದ್ದಾಳೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿದರು.
ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ, ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.