ರಸ್ತೆ ಅಪಘಾತಕ್ಕೆ 25 ವರ್ಷದ ಯುವತಿ ಬಲಿ!
ಬೆಂಗಳೂರು:- ರಸ್ತೆ ಅಪಘಾತದಲ್ಲಿ 25 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
25 ವರ್ಷದ ಸುಮಾ ಮೃತ ದುರ್ದೈವಿ. ಹೆಬ್ಬಾಳದ ಬ್ಯಾಂಕ್ ಒಂದರಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಡ್ಯೂಟಿಗೆ ಹೋಗಲು ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ. ಕೆಲಸದ ಹಿನ್ನೆಲೆ ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಸುಮಾ ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆ ಹೋಗಲು ಬಂದಾಗ ದುರಂತ ಸಂಭವಿಸಿದೆ. ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಮೃತದೇಹ ಇದೆ.
ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಊರಿನಿಂದ ಸ್ಥಳಕ್ಕೆ ದೌಡಾಯಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.