ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್!
ಬೆಂಗಳೂರು: ಅನುದಾನ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದ ಸ್ವಪಕ್ಷದ ಕಾಂಗ್ರೆಸ್ ಶಾಸಕರಿಗೆ, ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ತಲಾ ₹50 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಸಿಎಂ ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಚಿವ ಸಂಪುಟದಿಂದ ಹೊರಗಿರುವ ಶಾಸಕರ ಅಸಮಾಧಾನ ತಣಿಸಲು ನಿರ್ಣಾಯಕ ಹೆಜ್ಜೆ ಇಟ್ಟಿದ್ದಾರೆ.
ಇದಕ್ಕೂ ಮುನ್ನ, ಅನುದಾನ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಸ್ಥಗಿತದ ಕುರಿತು ಕೆಲ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಅಸಮಾಧಾನ ಸರಿಯಾಗಿ ಆಲಿಸಲು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದು, ಶಾಸಕರೊಂದಿಗೆ ವೈಯಕ್ತಿಕ ಸಭೆ ನಡೆಸಿದ್ದರು. ಅವರ ಮಧ್ಯಸ್ಥಿಕೆ ಬಳಿಕವೇ ಸಿಎಂ ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.