ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಬೀದರ್ನ ಗುರುದ್ವಾರ ಸ್ಪೋಟಿಸುವ ಸಂದೇಶ!
ಬೀದರ್:- ನಗರದ ಗುರುದ್ವಾರ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಸ್ಫೋಟ ಆಗುತ್ತೆಂದು ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.
ವಕೀಲ ಅಲೀಂ ಅಲ್ ಬುಕಾರಿ ಎಂಬ ವ್ಯಕ್ತಿಯಿಂದ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಮೇಲ್ ಬಂದಿರುವ ಕುರಿತು ಪೊಲೀಸ್ ಇಲಾಖೆಗೆ ಗುರುದ್ವಾರ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಸುದ್ದಿ ತಿಳಿಯುತ್ತಿದ್ದಂತೆ ನಿನ್ನೆ ಗುರುದ್ವಾರದಲ್ಲಿ ಎಸ್ಪಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿ 30ಕ್ಕೂ ಹೆಚ್ಚು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕಾಡ್ ಸೇರಿ ವಿಶೇಷ ತಂಡದಿಂದ ಪರಿಶೀಲನೆ ಮಾಡಲಾಗಿದ್ದು, ಯಾವುದೇ ರೀತಿ ಸ್ಫೋಟಕ ಪದಾರ್ಥಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.