ಕರ್ನಾಟಕದಲ್ಲಿ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Date:

ಕರ್ನಾಟಕದಲ್ಲಿ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವಾರು ಜಿಲ್ಲೆಗಳಿಗೆ ಎಚ್ಚರಿಕೆಯನ್ನು ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿಂದ ರೆಡ್ ಅಲರ್ಟ್ ಪ್ರಕಟಿಸಲಾಗಿದೆ. ಇವುಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ. ಈ ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುವ ಸಾಧ್ಯತೆ ಇದ್ದು, ಜನತೆ ಎಚ್ಚರಿಕೆಯಿಂದಿರುವಂತೆ ತಿಳಿಸಲಾಗಿದೆ.
ಆರೆಂಜ್ ಅಲರ್ಟ್ ಘೋಷಿಸಲಾದ ಜಿಲ್ಲೆಗಳು: ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು. ಈ ಪ್ರದೇಶಗಳಲ್ಲಿೂ ಕೂಡ ತೀವ್ರ ಮಳೆಯಾಗುವ ಸಾಧ್ಯತೆ ಇದೆ.
ಯೆಲ್ಲೋ ಅಲರ್ಟ್ ನೀಡಲಾಗಿರುವ ಜಿಲ್ಲೆಗಳು: ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ.
ಇನ್ನು ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...