ದಿಢೀರ್ ಆಸ್ಪತ್ರೆಗೆ ದಾಖಲಾದ ತಮಿಳುನಾಡು ಸಿಎಂ ಸ್ಟಾಲಿನ್!
ಚೆನ್ನೈ:- ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ದಿಢೀರ್ ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಟಾಲಿನ್ ಅವರಿಗೆ ಮುಂಜಾನೆ ವಾಕ್ ಮಾಡುವಾಗ ಸ್ವಲ್ಪ ತಲೆಸುತ್ತು ಬಂದಿದೆ. ಅವರನ್ನು ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸಿ, ಅಗತ್ಯ ಟೆಸ್ಟ್‌ಗಳನ್ನು ಮಾಡಿದ್ದಾರೆ.
ಅಷ್ಟೇ ಅಲ್ಲದೇ ಅವರು ಬೇಗನೆ ಚೇತರಿಸಿಕೊಳ್ಳಲಿ ಮತ್ತು ಕರ್ತವ್ಯಗಳನ್ನು ಪುನರಾರಂಭಿಸಲಿ ಎಂದು ಅವರು ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು ಹಾರೈಸಿದ್ದಾರೆ.