ಬೈಕ್-ಬಿಎಂಟಿಸಿ ಬಸ್ ಅಪಘಾತ: ಮಹಿಳೆ ಸಾವು!
ಬೆಂಗಳೂರು:-ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಿಂದ ಹಂಚಿಪುರ ಕಾಲೋನಿಗೆ ಹೋಗುತ್ತಿದ್ದ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ
ಈ ವೇಳೆ ಸಾರ್ವಜನಿಕರು ಬಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಡ್ರೈವರ್ ಹಾಗೂ ಕಂಡಕ್ಟರ್ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ತಲಘಟ್ಟಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.