ಸೆ.22 ರಿಂದ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ : ಸಿಎಂ ಸಿದ್ದರಾಮಯ್ಯ

Date:

ಸೆ.22 ರಿಂದ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರೀ ವಿವಾದಕ್ಕೆ ಗುರಿಯಾಗಿರುವ ಕಾಂತರಾಜು ಆಯೋಗದ ಜಾತಿಗಣತಿ ವರದಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ವರದಿಯನ್ನು ಪಕ್ಕಕ್ಕಿಟ್ಟು, ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಈ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟಿಸಿದೆ.
ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಯಿತು. ಸಭೆಯಲ್ಲಿ ಮರು ಸಮೀಕ್ಷೆಯ ಅವಶ್ಯಕತೆ, ರೂಪರೇಷೆ ಮತ್ತು ಜವಾಬ್ದಾರಿ ವಿಚಾರವಾಗಿ ಚರ್ಚೆ ನಡೆದಿದೆ.
ಈ ಹೊಸ ಜಾತಿಗಣತಿಗೆ ದಿನಾಂಕವೂ ನಿಗದಿಯಾಗಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಯಲಿದ್ದು, ಅಕ್ಟೋಬರ್ ಕೊನೆಯೊಳಗಾಗಿ ಸಮೀಕ್ಷೆಯ ವರದಿ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಸಿಎಂ ಸೂಚಿಸಿದ್ದಾರೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಈ ಮರು ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯ ಮಾದರಿ, ರೂಪರೇಷೆ ಹಾಗೂ ಕಾಲಾವಧಿ ಕುರಿತು ನಾಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಲಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...