No menu items!
5.3 C
Munich
Wednesday, September 23, 2026

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

Must read

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ನಟ ದರ್ಶನ್ ಹಾಗೂ ಇತರ 17 ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ ದರ್ಶನ್ ಸೇರಿ ಏಳು ಮಂದಿಯ ಜಾಮೀನನ್ನು ರದ್ದು ಮಾಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಈ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ. ಪವಿತ್ರಾ ಗೌಡ A1, ದರ್ಶನ್ A2, ಪ್ರದೂಷ್ A14, ಲಕ್ಷ್ಮಣ್ A12, ನಾಗರಾಜ್ A11, ಅನುಕುಮಾರ್ A7, ಜಗದೀಶ್ A6 ಈ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆಯ ವಾದ-ಪ್ರತಿವಾದವನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.

- Advertisement -spot_img

More articles

- Advertisement -spot_img

Latest article