ಸಿಎಂ-ಡಿಸಿಎಂ ನಡುವೆ ಒಪ್ಪಂದ ಆಗಿದ್ದರೇ ಅಧಿಕಾರ ಹಂಚಿಕೆ ಆಗಲಿ: ಕಾಂಗ್ರೆಸ್ ಶಾಸಕ ಹೊಸ ಬಾಂಬ್
ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ತಿರುವುಗಳು ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇಪದೇ ದೆಹಲಿಗೆ ಭೇಟಿ ನೀಡುತ್ತಿರುವುದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಗುಲಗಳಿಗೆ ಸರಣಿ ಭೇಟಿಗಳನ್ನು ನೀಡುತ್ತಿರುವುದು ಹಲವು ಪ್ರಶ್ನೆಗಳನ್ನು ಎಬ್ಬಿಸುತ್ತಿದೆ.
ಈ ನಡುವೆ ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಒಂದು ಹೊಸ ವಿವಾದಕ್ಕೆ ಕಿವಿಹೊರೆಯುವಂತೆ ಮಾಡಿದ್ಧಾರೆ. “ಸಿಎಂ ಹಾಗೂ ಡಿಸಿಎಂ ನಡುವೆ ಅಧಿಕಾರ ಹಂಚಿಕೆ ಆಗಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ,” ಎಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲದ ಕಾರಣ, ಅದರ ಬಗ್ಗೆ ಚರ್ಚೆ ಅನಗತ್ಯ” ಎಂದು ಸ್ಪಷ್ಟಪಡಿಸಿದ್ದಾರೆ.
“ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನನ್ನನ್ನು ಕರೆದು ಮಾತನಾಡಿದ್ದಾರೆ. ಆದರೆ ನಾನು ಯಾರ ವಿರುದ್ಧವೂ ಆರೋಪಿಸುತ್ತಿಲ್ಲ. ನನ್ನ ಜಗಳೂರು ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ,” ಎಂದು ದೇವೇಂದ್ರಪ್ಪ ಹೇಳಿದರು.