ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತರ ಶಾಕ್: ರಾಜ್ಯದ ಹಲವೆಡೆ ದಾಳಿ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಸಿದ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ ವಿವಿಧ ठೆಕೆಗಳಿಗೆ ಲೋಕಾಯುಕ್ತ ತಂಡವು ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನಲ್ಲೂ ಎರಡು ಸ್ಥಳಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಹಾಸನ, ಕೊಡಗು ಜಿಲ್ಲೆಯಲ್ಲಿ ಕೂಡ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಕೊಡಗು ಜಿಲ್ಲೆ ಕುಶಾಲನಗರದ ಫಾರ್ಮ್ಹೌಸ್ ಮೇಲೂ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಸ್ನೇಹ ನೇತೃತ್ವದಲ್ಲಿ ದಾಳಿ ನಡೆದಿದೆ.