ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಜನಪ್ರತಿನಿಧಿಗಳ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ತೀರ್ಪು ನೀಡಿದ್ದಾರೆ.
ಕೆಆರ್ ನಗರ ಮೂಲದ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಹಾಗೂ ಅಪಹರಣ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ನ್ಯಾಯಾಲಯ ಈ ತೀರ್ಪು ನೀಡಿದೆ.
2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ಪ್ರಜ್ವಲ್ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿರುದ್ಧ ತನಿಖೆ ಆರಂಭವಾಗಿತ್ತು. ಮೇ 31ರಂದು ಅವರನ್ನು ಬಂಧಿಸಲಾಗಿತ್ತು.