No menu items!
21.7 C
Munich
Thursday, July 23, 2026

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ನೆರವು: ಸಚಿವ ಜಮೀರ್

Must read

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ನೆರವು: ಸಚಿವ ಜಮೀರ್

 

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಬಡ ಕುಟುಂಬಗಳಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಾಹಿತಿ ನೀಡಿದ್ದು, ಸಾಮೂಹಿಕ ವಿವಾಹ ಮಾಡುವ ಜೋಡಿಗಳಿಗೆ ಪ್ರತಿ ಜೋಡಿಗೆ ₹50,000 ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಜೆಟ್ನಲ್ಲಿ ಈ ಯೋಜನೆಗೆ ಘೋಷಣೆ ನೀಡಲಾಗಿತ್ತು ಹಾಗೂ ಇದೀಗ ಅಧಿಕೃತ ಆದೇಶವೂ ಹೊರಡಿಸಲಾಗಿದೆ. ಬಡ ಕುಟುಂಬಗಳಿಗೆ ಈ ಯೋಜನೆಯಿಂದ ಧನ ಸಹಾಯ ಲಭಿಸಲಿದೆ.

ಇದಲ್ಲದೆ, ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇಲಾಖೆಯ ವತಿಯಿಂದ ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು. ಪ್ರತಿಭೆ ಮತ್ತು ಅವಶ್ಯಕತೆ ಇರುವವರಿಗೆ ಸರ್ಕಾರದಿಂದ ಹೆಚ್ಚಿನ ಸಹಾಯ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article