ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿದಂತೆ ಹಲವೆಡೆ ಆ.16ರವರೆಗೆ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.
ಕಳೆದ ಎರಡು–ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಮಧ್ಯಾಹ್ನದ ನಂತರವೂ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.