ಕೆಂಪುಕೋಟೆಯಲ್ಲಿ ಬಾರಿ ಧ್ವಜಾರೋಹಣ ನೆರವೇರಿಸಿ ದಾಖಲೆ ಬರೆದ ಪ್ರಧಾನಿ ಮೋದಿ!
ನವದೆಹಲಿ: ದೇಶಾದ್ಯಾಂತ ಸ್ವಾತಂತ್ರ್ಯೋತ್ಸವ ಹಬ್ಬದ ಸಂಭ್ರಮ ಬೀಡುತ್ತಿದೆ. 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕೆಂಪುಕೋಟೆಗೆ ಆಗಮಿಸಿದ ಮೋದಿ ಅವರಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ಅವರು ರಾಜ್ಘಾಟ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಧ್ವಜಾರೋಹಣದ ನಂತರ ಐಎಎಫ್ನ ಹೆಲಿಕಾಪ್ಟರ್ ಪುಷ್ಪವೃಷ್ಟಿ ನಡೆಸಿತು.
ಸಮಾರಂಭದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.