ಗ್ಯಾಸ್ ಸಿಲಿಂಡರ್ ಸ್ಫೋಟ; 8 ವರ್ಷದ ಬಾಲಕ ಸಾವು, 8 ಮಂದಿಗೆ ಗಾಯ
ಬೆಂಗಳೂರು: ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಸುಮಾರು 10 ಮನೆಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅದಲ್ಲದೆ ಸ್ಫೋಟದಲ್ಲಿ ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಎಂಟು ಮಂದಿ ಗಾಯಗೊಂಡಿದ್ದು,
ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಸಂಭವಿಸಿದ್ದು, ಇದರಿಂದ ಭಾರೀ ಸ್ಫೋಟ ಉಂಟಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸ್ಥಳಕ್ಕೆ ಅಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.