Power Cut Today: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್; ಬೆಸ್ಕಾಂ ಮಾಹಿತಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಪ್ರಕಟಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಸ್.ಆರ್.ಎಸ್. ಪೀಣ್ಯ ಉಪಕೇಂದ್ರ ವ್ಯಾಪ್ತಿಯ ಗೃಹಲಕ್ಷ್ಮಿ ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ. ಪಾಳ್ಯ, ಇಸ್ರೋ, ನಾರಾಯಣಪುರ, ಗಣಪತಿನಗರ ಮುಖ್ಯ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ ಥಿಯೇಟರ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೊನಿ,
ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ, ಪೀಣ್ಯ 4ನೇ ಹಂತ, ರಿಲಯನ್ಸ್ ಇಂಡಸ್ಟ್ರೀಸ್, ಸಿಕೆಎ, ಅಲಿಸ್ಡಾ, ರಾಘವೇಂದ್ರ ಲೇಔಟ್, ಆರ್ಎನ್ಎಸ್ ಮೋಟರ್ಸ್, ಮುನೇಶ್ವರ ನಗರ, ವೈಷ್ಣವಿ ಅಪಾರ್ಟ್ಮೆಂಟ್, ಪ್ಲಾಟಿನಂ ಸಿಟಿ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.