ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ದರ್ಶನ್?
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ಗೆ ಹೈಕೋರ್ಟ್ ನೀಡಿದ್ದ ಜಾಮೀನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ, ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರೂ, ಅವರನ್ನು ಬಳ್ಳಾರಿ ಜೈಲುಗೆ ಸ್ಥಳಾಂತರಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಕುರಿತು ಜೈಲಾಧಿಕಾರಿಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಮೂಲಕ ಮನವಿ ಸಲ್ಲಿಸಲಾಗಲಿದೆ.
ಮೂಲಗಳ ಪ್ರಕಾರ, ದರ್ಶನ್ ಹಿಂದಿನ ಬಾರಿ ಜೈಲಿನಲ್ಲಿ ಇದ್ದಾಗ ಕೆಲವು ರೌಡಿಶೀಟರ್‌ಗಳೊಂದಿಗೆ ಸಂಪರ್ಕ ಬೆಳೆಸಿದ್ದರು. ವಿಶೇಷವಾಗಿ ನೋಟೋರಿಯಸ್ ವಿಲ್ಸನ್ ಗಾರ್ಡನ್ ನಾಗನೊಂದಿಗೆ ಅವರು ಗುರುತು ಮಾಡಿಕೊಂಡಿದ್ದರು. ಅಲ್ಲದೇ, ಜೈಲಿನೊಳಗೆ ಐಷಾರಾಮಿ ಸೌಲಭ್ಯಗಳು ದೊರೆತಿದ್ದವು ಎಂಬ ಆರೋಪವೂ ಕೇಳಿಬಂದಿತ್ತು. ಈ ಬಾರಿಯೂ ಇದೇ ರೀತಿಯ ಸಂಗತಿ ಮರುಕಳಿಸುವ ಸಾಧ್ಯತೆ ಇರುವುದರಿಂದ, ದರ್ಶನ್‌ನ್ನು ಬಳ್ಳಾರಿ ಜೈಲುಗೆ ಶಿಫ್ಟ್ ಮಾಡಲು ಜೈಲಾಧಿಕಾರಿಗಳು ಮುಂದಾಗಿದ್ದಾರೆ.