ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ!
ಉಡುಪಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಪಿ ಸುಧಾಕರ್ ನಾಯಕ್ ಅವರ ನೇತೃತ್ವದ ತಂಡ ಬೆಳ್ತಂಗಡಿಗೆ ಆಗಮಿಸಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಮಣಿಪಾಲ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಡಿವೈಎಸ್ಪಿ ಪ್ರಭು ಡಿ.ಟಿ., ಬ್ರಹ್ಮಾವರ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಕಾರ್ಕಳ ಗ್ರಾಮಾಂತರ ಇನ್ಸ್ಪೆಕ್ಟರ್ ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.