ಧರ್ಮಸ್ಥಳ ಕೇಸ್: ಯೂಟ್ಯೂಬರ್ ಬಂಧನಕ್ಕೆ ಬಲೆ ಬೀಸಿದ ಪೊಲೀಸರು: ಸಮೀರ್ ಪರಾರಿ..!?
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಪೊಲೀಸರು ಬಲೆ ಬೀಸಿದ್ದಾರೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂಬ ದೂರಿನ ಮೇರೆಗೆ, ಸಮೀರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆನಂದ್ ಎನ್ ಅವರ ನೇತೃತ್ವದಲ್ಲಿ, ಪೊಲೀಸರು ಬೆಂಗಳೂರಿನ ಜಿಗಣಿಯಲ್ಲಿರುವ ಸಮೀರ್ ಮನೆಗೆ ದಾಳಿ ನಡೆಸಿದರು. ಆದರೆ, ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಸಮೀರ್ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ.
ಸಮೀರ್ ತನ್ನ ಪತ್ನಿಗೆ ಮೊಬೈಲ್ ಹಸ್ತಾಂತರಿಸಿ, ಬಂಧನದ ಭೀತಿ ನಡುವೆ ಓಡಿಹೋಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕುಟುಂಬಸ್ಥರಿಗೆ ಸಮೀರ್ ಎಲ್ಲಿದ್ದರೂ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಸಮೀರ್ ಈಗಾಗಲೇ ಮಂಗಳೂರು ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ಆತ ಪೊಲೀಸರ ವಶವಾಗುವ ಸಾಧ್ಯತೆ ಇದೆ.