No menu items!
5.3 C
Munich
Wednesday, September 23, 2026

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ದರ್ಶನ್ ಮತ್ತೆ ಶಿಫ್ಟ್ ಆಗ್ತಾರಾ..?

Must read

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ದರ್ಶನ್ ಮತ್ತೆ ಶಿಫ್ಟ್ ಆಗ್ತಾರಾ..?


ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಬೇಕೆಂದು ಜೈಲು ಅಧಿಕಾರಿಗಳು ಬೆಂಗಳೂರಿನ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಇದರ ಬಗ್ಗೆ ಕೋರ್ಟ್ನಲ್ಲಿ ನಿರ್ಧಾರ ಆಗಲಿದೆ. 64ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಶ್ ಜೈಲು ಸ್ಥಳಾಂತರ ಕುರಿತು ಆದೇಶ ಹೊರ ಬಿಳಲಿದೆ. ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಆರೋಪಿಗಳು ಕೂಡ ಕೋಟ್ರ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ಸಂಬಂಧ ವಿಚಾರಣೆ ನಡೆಸಿ ಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರೋ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article