ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಬಾಲನ್ ಕಳೆದ ವಾರ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ತಾಂತ್ರಿಕ ಅಂಶಗಳ ಆಧಾರದ ಮೇಲೆ ಜಾಮೀನು ನೀಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ, ಈ ಅರ್ಜಿಗೆ ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಕಾಯ್ದಿರಿಸಿದ್ದ ಆದೇಶವನ್ನು ಇಂದು 64ನೇ ಸೆಷನ್ಸ್ ಕೋರ್ಟ್ ಪ್ರಕಟಿಸಿದೆ. ಜಾಮೀನು ಅರ್ಜಿ ವಜಾ ಆಗುವುದರಿಂದ ಪವಿತ್ರಾ ಗೌಡ ಅವರ ಜೈಲು ವಾಸ ಮುಂದುವರಿಯಲಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ.