ಪ್ರಮಾಣ ವಚನ ಸ್ವೀಕರಿಸಿದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆಲುವು ಸಾಧಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಅಮಿತ್ ಶಾ, ರಾಜನಾಥ್ ಸಿಂಗ್, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಇದು ವಿಶೇಷ ಆಕರ್ಷಣೆಯಾಗಿತ್ತು. ಜಗದೀಪ್ ಧನ್ಕರ್ ಅವರು ರಾಜೀನಾಮೆಯ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಹಾಜರಾಗಿದ್ದರು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಸುರ್ದಶನ್ ರೆಡ್ಡಿ 300 ಮತಗಳೊಂದಿಗೆ ಸೋಲನುಭವಿಸಿದ್ದರು.
.