ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ
ಬೆಂಗಳೂರು: ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಆ ಮೂಲಕ ಗಣೇಶ ಮೆರವಣಿಗೆ ಸಂಭ್ರಮದಲ್ಲಿದ್ದವರು ಸಾವಿನ ಮನೆ ಸೇರುವಂತಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು,
ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ದುರಂತದ ಬಗ್ಗೆ ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ನಿಗಾವಹಿಸಿದ್ದು, ಅಧಿಕಾರಿಗಳು-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳ ಹಸ್ತಾಂತರ ಮಾಡಲಾಗಿದೆ.
ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ ಆಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಡಿಹೆಚ್ಒ ಉಸ್ತುವಾರಿ ವಹಿಸಿದ್ದಾರೆ. ಅಗತ್ಯ ವೈದ್ಯರ ತಂಡವನ್ನು ರಚಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.