ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ
ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್ಮೆಂಟ್ನಲ್ಲಿರುವ ಅವರ ಫ್ಲಾಟ್ನಿಂದ ಸುಮಾರು ₹3 ಲಕ್ಷ ನಗದು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ದರ್ಶನ್ ಅವರ ಮ್ಯಾನೇಜರ್ ನಾಗರಾಜ್, ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಕೆಲವು ದಿನ ಮೈಸೂರಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 4ರಿಂದ 8ರ ಅವಧಿಯಲ್ಲಿ ನಗದು ಕದ್ದುಕೊಂಡು ಹೋಗಲಾಗಿದೆ ಎಂದು ದೂರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ವಿಜಯಲಕ್ಷ್ಮೀ ಅವರು ಮನೆ ಕೆಲಸದವರ ಮೇಲೆ ಅನುಮಾನ ಹೊರಹಾಕಿದ್ದಾರೆ. ಮನೆ ಕೆಲಸದವರ ಮೇಲೆ ದೂರು ದಾಖಲು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.