ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

Date:

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಇದೀಗ ವಿಪಕ್ಷ ಶಾಸಕರಿಗೂ ಅನುದಾನ ಹಂಚಿಕೆ ಮಾಡಿದೆ. ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿದ್ದ ಸರ್ಕಾರ, ಇದೀಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ ರೂ. ವಿಶೇಷ ಅನುದಾನ ನೀಡಲು ನಿರ್ಧರಿಸಿದೆ.

ಅನುದಾನ ಹಂಚಿಕೆ ಕುರಿತಂತೆ ಪ್ರತಿಪಕ್ಷ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಈ ಅನುದಾನ ನೀಡಲಾಗುತ್ತಿದೆ.

ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಡಿ ಬರುವ ರಸ್ತೆ ಮತ್ತು ಸೇತುವೆ ಕಾಮಗಾರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯಡಿ ಬರುವ ನಗರ ಪ್ರದೇಶದ ಕಾಮಗಾರಿಗಳಿಗೆ 18.75 ಕೋಟಿ ರೂ. ಅನುದಾನ ನೀಡಲಾಗುವುದು. ಇತ್ತ ವಿವೇಚನಾಧಿಕಾರದಡಿ ವಿಧಾನಸಭಾ ಸದಸ್ಯರು ಆಯ್ಕೆ ಮಾಡಬಹುದಾದ ಇತರೆ ಇಲಾಖೆಯ ಕಾಮಗಾರಿಗಳಿಗೆ 6.25 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.

ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ‌ ಅನುದಾನ ನೀಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ತಮಗೂ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ಶಾಸಕರಿಗೂ ತಲಾ 25 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...