No menu items!
4.9 C
Munich
Saturday, May 2, 2026

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Must read

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಭಾನುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು.

ದೆಹಲಿ ಭೇಟಿಯ ಕುರಿತು ಕೇಳಿದಾಗ, “ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ” ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article