ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಇಂದು (ಸೆಪ್ಟೆಂಬರ್ 21) ಪೀಠದಲ್ಲಿ ನಡೆದ ಟ್ರಸ್ಟ್ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯದರ್ಶಿ ನೀಲಕಂಠ ಅಸೂಟಿ, “ಸ್ವಾಮೀಜಿ ಅವರು ದಾವಣಗೆರೆ ಸೇರಿದಂತೆ ಹಲವು ಕಡೆ ಆಸ್ತಿಗಳನ್ನು ಮಾಡಿಕೊಂಡಿದ್ದಾರೆ. ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳುವುದೇ ಇಲ್ಲ, ಪೀಠದ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ. ಜೊತೆಗೆ ಒಂದು ಪಕ್ಷದ ಪರವಾಗಿ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಈ ಎಲ್ಲ ಕಾರಣಗಳ ಆಧಾರದ ಮೇಲೆ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಸ್ಪಷ್ಟಪಡಿಸಿದರು.