ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್
ಮೈಸೂರು: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಬಾನು ಮುಸ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಈ ಮೂಲಕ ಮೈಸೂರು ದಸರಾ ಉತ್ಸವಕ್ಕೆ ಸಾಂಪ್ರದಾಯಿಕವಾಗಿ ಆರಂಭವಾಯಿತು.
ಈ ಬಾರಿಯ ದಸರಾ ಹಿನ್ನೆಲೆಯಲ್ಲಿ ಅರಮನೆ ನಗರಿ ಮೈಸೂರು ನವವಧುವಿನಂತೆ ಕಂಗೊಳಿಸಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಣಬಡಿಸಲು ಸಜ್ಜುಗೊಂಡಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಇಡೀ ನಗರವೇ ಹಬ್ಬದ ಸಂಭ್ರಮದಲ್ಲಿ ಹೊಳೆಯುತ್ತಿದೆ.